ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿ ಗ್ರಾಮದಲ್ಲಿ ಅಗ್ನಿಕೊಂಡದಲ್ಲಿ ಓಡುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರಿಗೆ ಸುಟ್ಟ ಗಾಯಗಳಾಗಿವೆ.
ಇಂದು ಗ್ರಾಮದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಅಗ್ನಿಕೊಂಡ ಕಾರ್ಯಕ್ರಮ ನಡೆಸಲಾಯಿತು.
ಈ ವೇಳೆ ಅರ್ಚಕರ ಜೊತೆಯಲ್ಲಿ ಅಗ್ನಿಕೊಂಡದಲ್ಲಿ ಓಡುತ್ತಿದ್ದ ವ್ಯಕ್ತಿ ಕೆಂಡದ ಮೇಲೆ ಬಿದ್ದ ಪರಿಣಾಮ ಮೈ ಮೇಲೆ ಸುಟ್ಟ ಗಾಯಗಳಾಗಿವೆ. ಕೂಡಲೇ ಆತನನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

