ಯಶವಂತಪುರ ವಿಧಾನಸಭಾ ಕ್ಷೇತ್ರದ ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಿನಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕ ಸೋಮಶೇಖರ್ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿ ಅಹವಾಲು ಸ್ವೀಕರಿಸಿದರು.
ಜೊತೆಗೆ ಫಲಾನುಭವಿಗಳಿಗೆ ಶಾಸಕರ ಸಮ್ಮುಖದಲ್ಲಿ ಸವಲತ್ತುಗಳ ಮಂಜೂರಾತಿ ಪತ್ರ ವಿತರಿಸಲಾಯಿತು.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

