ಸಿಐಟಿಯು ಆನೇಕಲ್ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ಚಂದಾಪುರ ಸರ್ಕಲ್ ನಲ್ಲಿ ಮೇ ಡೇ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಮೆರವಣಿಗೆಯಲ್ಲಿ ಕೈಗಾರಿಕಾ ಕಾರ್ಮಿಕರು,ಕಟ್ಟಡ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು,ರೈತ ಮುಖಂಡರುಗಳು ಮೆರವಣಿಗೆಯಲ್ಲಿ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಾರ್ಮಿಕ ಹಕ್ಕುಗಳನ್ನ ರಕ್ಷಣೆ ಮಾಡುವ ಜೊತೆಗೆ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಉಂಟಾಗುತ್ತಿರುವ ಅನ್ಯಾಯ ತಡೆಗೆ ಸೂಕ್ತ ಕಾನೂನು ರೂಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು.
ಬಹಿರಂಗ ಸಭೆಯ ಸ್ವಾಗತವನ್ನು ಸಿಐಟಿಯು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಸುನೀಲ್ ಜಿ.ಪಿ. ಮಾಡಿದರು.
ಧ್ವಜಾರೋಹಣವನ್ನು ಸಿಐಟಿಯು ತಾಲ್ಲೂಕು ಅಧ್ಯಕ್ಷರಾದ ಪಿ.ಸುರೇಶ ನೆರವೇರಿಸಿ ಮಾತನಾಡಿದರು.
ತಾಲೂಕು ಉಪಾಧ್ಯಕ್ಷರಾದ ಡಿ.ಮಹದೇಶ್ ಮಾತನಾಡಿದರು.ಸಿಐಟಿಯು ರಾಜ್ಯ ಕಾರ್ಯದರ್ಶಿ ಬಿ.ಎನ್. ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಕೆ. ಬಾಲರಾಜ್ ರವರು ಮಾತನಾಡಿದರು.ತಾಲ್ಲೂಕಿನ ಭೂಸ್ವಾಧೀನ ಹೋರಾಟ ಸಮಿತಿ ಮುಖಂಡರು ಚಂದ್ರಾರೆಡ್ಡಿ ಭಾಗವಹಿಸಿ ಮಾತನಾಡಿದರು. ತಾಲೂಕು ಖಜಾಂಚಿ ಜಿ.ಡಿ. ಚನ್ನಪ್ಪ ರವರು ವಂದನಾರ್ಪಣೆಯನ್ನು ಸಲ್ಲಿಸಿದರು.

