Breaking
25 May 2026, Mon

ಭಾರಿ ಮಳೆಗೆ ಆಟೋ ಮೇಲೆ ಮರ ಬಿದ್ದು ಚಾಲಕ ಸಾವು

ಬೆಂಗಳೂರು ನಗರದ ಹಲವೆಡೆ ಜೋರಾಗಿ ಸುರಿದ ಮಳೆಯಿಂದಾಗಿ ಕತ್ರಿಗುಪ್ಪೆ ರಸ್ತೆಯಲ್ಲಿ ದುರಂತವೊಂದು ಸಂಭವಿಸಿದೆ.

ಚಲಿಸುತ್ತಿದ್ದ ಆಟೋವೊಂದರ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಆಟೋ ಚಾಲಕ ಮಹೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಈ ದುರ್ಘಟನೆ ಭಾರೀ ಮಳೆಯಿಂದಾಗಿ ಉಂಟಾದ ಗಾಳಿಯಿಂದ ಮರ ಬಿದ್ದ ಕಾರಣ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್, ಆ ಸಂದರ್ಭದಲ್ಲಿ ಆಟೋದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply