Breaking
25 May 2026, Mon

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾಗಿ ಆರ್ ಕೆ ರಮೇಶ್ ಅವಿರೋಧ ಆಯ್ಕೆ

ಆನೇಕಲ್ ತಾಲ್ಲೂಕಿನಿಂದ ಬೆಂಗಳೂರು ಹಾಲು ಒಕ್ಕೂಟಕ್ಕೆ (ಬಮೂಲ್) ನಿರ್ದೇಶಕರಾಗಿ ಆರ್.ಕೆ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಮೂಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕ ಸ್ಥಾನಕ್ಕೆ ಆರ್.ಕೆ.ರಮೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ಇತರೆ ಆರು ಜನ ಆಕಾಂಕ್ಷಿಗಳು ಸಲ್ಲಿಸಿದ ನಾಮಪತ್ರಗಳು ಅಮಾನ್ಯವಾದ ಹಿನ್ನೆಲೆಯಲ್ಲಿ ಆರ್.ಕೆ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಮೂಲ್ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಂಎಲ್ಎ ಅಭ್ಯರ್ಥಿಯಾಗಿ ಸೋತಿದ್ದರೂ ಸಹ ಜನಮನ್ನಣೆ ಗಳಿಸಿದ ಹಿನ್ನೆಲೆ ಮತ್ತೋಮ್ಮೆ ಗೆದ್ದಿದ್ದಾರೆ ಎಂದು ಕುಟುಂಬ ವರ್ಗ ಹಾಗೂ ಕ್ಷೇತ್ರದ ಜನತೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply