Breaking
25 May 2026, Mon

ದೊಡ್ಡಹಾಗಡೆ ಗ್ರಾಮದಲ್ಲಿ ಗ್ರಾಮ ಸಭೆ ಆಯೋಜನೆ

ಆನೇಕಲ್ ಗ್ರಾಮ ಸಭೆ ಕೈಗೊಳ್ಳುವ ತೀರ್ಮಾನಗಳು ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿರುತ್ತವೆ. ಈ ನಿಟ್ಟಿನಲ್ಲಿ ಇಂತಹ ಗ್ರಾಮಗಳಲ್ಲಿ ಪ್ರತಿಯೊಬ್ಬ ನಾಗರಿಕನು ಸಕ್ರಿಯವಾಗಿ ಪಾಲ್ಗೊಳ್ಳಬೇಕಾದ ಅಗತ್ಯವಿರುತ್ತದೆ ಎಂದು ಬ್ಯಾಗಡದೇನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಎಂ.ಚಂದ್ರಶೇಖರ್‌ ಹೇಳಿದರು.


ತಾಲ್ಲೂಕಿನ ದೊಡ್ಡಹಾಗಡೆ ಗ್ರಾಮದಲ್ಲಿ ಮೊದಲ ಸುತ್ತಿನ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ಮುಖ್ಯವಾಗಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಚರಂಡಿ, ಕಸವಿಲೇವಾರಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.


ಈ ವೇಳೆ ಗ್ರಾಮಪಂಚಾಯತಿ ವ್ಯಾಪ್ತಿಯ ಜನರು ತಮ್ಮ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಸಭೆಯಲ್ಲಿ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ತಮ್ಮ ಇಲಾಖೆಯಲ್ಲಿ ದೊರೆಯುವ ಮಾಃಹಿತಿಯನ್ನು ಗ್ರಾಮಸ್ಥರಿಗೆ ತಿಳಿಸುವ ಮೂಲಕ, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.


ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಖಾತಾ ಆಂದೋಲನವನ್ನು ಆಯೋಜಿಸಲಾಗುತ್ತಿದೆ. ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ತಮ್ಮ ಆಸ್ತಿ ತೆರಿಗೆಯನ್ನು ಕಟ್ಟುವ ಮೂಲಕ ಪಂಚಾಯಿತಿಯ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ತಿಳಿಸಿದರು. ಈ ವೇಳೆ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸರಸ್ವತಮ್ಮ ಮುನಿರಾಜು, ಸದಸ್ಯರಾದ ದೊಡ್ಡಹಾಗಡೆ ಹರೀಶ್‌, ರತ್ನಮ್ಮ ರಾಜಪ್ಪ, ತಿಲಕ್‌ಗೌಡ, ಸತೀಶ್‌, ಶಾಂತಮ್ಮ ಬೈರಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜು ಹಾಜರಿದ್ದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply