ಆನೇಕಲ್ ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ 2015-26ನೇ ಸಾಲಿನ ಮೊದಲನೆ ಸುತ್ತಿನ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.
ಇನ್ನು ಮೊದಲನೆ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಮುನಿಕೃಷ್ಣರವರು ವಹಿಸಿದ್ದರು.
ಇನ್ನು ಗ್ರಾಮಸಭೆಯಲ್ಲಿ ಇಲಾಖೆ ಅದಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು ಹಾಗೆಯೇ ಸಾರ್ವಜನಿಕರು ಸಹ ತಮ್ಮ ತಮ್ಮ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಮತ್ತು ಇಲಾಖೆ ಅದಿಕಾರಿಗಳ ಮುಂದೆ ಹೇಳಿಕೊಂಡ ದೃಶ್ಯ ಕಂಡು ಬಂತು. ಇದೇ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಯಿತು.
ಇನ್ನು ಈ ವೇಳೆ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ. ಮುನಿಕೃಷ್ಣರವರು ಮಾತನಾಡಿ ಗ್ರಾಮಸಭೆಯಲ್ಲಿ ಸಾರ್ವಜನಿಕರು ತಿಳಿಸಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು. ಇನ್ನು ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ದಿಗೆ ಈಗಾಗಲೇ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಮುಂದಿನ ದಿನಗಳಲ್ಲಿ ಮತ್ತಷ್ಠು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಇನ್ನು ಗ್ರಾಮ ಸಭೆಯಲ್ಲಿ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಜಮುನಾ ರಾಣಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು. ಸ್ಥಳೀಯ ಮುಖಂಡರುಗಳು. ಇಲಾಖೆ ಅದಿಕಾರಿಗಳು. ಪಿಡಿಓ ಬಸವರಾಜ್ ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರು ಬಾಗವಹಿಸಿದ್ದರು

