ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ವಸಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಬಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ವಸಂತ್ ರವರನ್ನ ನೂತನ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದರು. ನೂತನ ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮನೋದೇವಿ ಗಣೇಶ್ ಸೇರಿದಂತೆ ಪಂಚಾಯಿತಿ ಸದಸ್ಯರು ಸಿಹಿ ತಿನಿಸಿ ಅಭಿನಂದನೆ ಸಲ್ಲಿಸಿದರು
ಇದೆ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷರಾದ ಬಳ್ಳೂರು ವಸಂತ್ ನನ್ನ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಗ್ರಾಮ ಪಂಚಾಯಿತಿಯ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು ಅವುಗಳ ಬಗ್ಗೆ ಗಮನಹರಿಸಿ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು. ಗ್ರೇಟರ್ ಬೆಂಗಳೂರು ಬಗ್ಗೆ ವಿರೋಧ ವ್ಯಕ್ತಪಡಿಸಿದ ಅವರು ಗ್ರಾಮ ಪಂಚಾಯಿತಿಗಳನ್ನು ಏಕಾಏಕಿ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತಂದರೆ ಬೆಳವಣಿಗೆ ಕುಂಠಿತವಾಗುತ್ತದೆ. ಜೊತೆಗೆ ಸ್ಥಳೀಯ ಯುವಕರು ಚುನಾವಣೆಗೆ ಸ್ಪರ್ಧೆ ಮಾಡಲು ಕಷ್ಟವಾಗುತ್ತದೆ ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಬಗ್ಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ವಸಂತ್ ಇದೆ ವೇಳೆ ತಿಳಿಸಿದರು.

