ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಆನೇಕಲ್ ಕಚೇರಿಯಲ್ಲಿ ಬಮೂಲ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಆರ್ ಕೆ ರಮೇಶ್ ರವರಿಗೆ ಬಮೂಲ್ ಅಧಿಕಾರಿಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ರವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅದರಂತೆ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ಬಮೂಲ್ ನೂತನ ನಿರ್ದೇಶಕರಾಗಿ ಆರ್ ಕೆ ರಮೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಿರ್ದೇಶಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಆನೇಕಲ್ ಬಮುಲ್ ಕಚೇರಿಗೆ ಆಗಮಿಸಿದ ಆರ್‌ಕೆ ರಮೇಶ್ ರವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಇದೇ ವೇಳೆ ಮಾತನಾಡಿದ ಬಮೂಲ್ ನೂತನ ನಿರ್ದೇಶಕರಾದ ಅರ್.ಕೆ ರಮೇಶ್ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಹಾಲು ಉತ್ಪಾದಕರು ಹಾಗೂ ಸಹಕಾರ ಸಂಘದ ಪದಾಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದರು. ನಾನು ಈ ಹಿಂದೆ ಬಮೂಲ್ ಅಧ್ಯಕ್ಷರಾಗಿದ್ದ ಸಮಯದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಹಾಲು ಉತ್ಪಾದಕರಿಗೆ ಅನುಕೂಲವಾಗಲು ವಿವಿಧ ಯೋಜನೆಗಳನ್ನ ಜಾರಿಗೆ ತಂದಿದೆ.
ಮುಂದಿನ ದಿನಗಳಲ್ಲಿ ಹಾಲು ಉತ್ಪಾದನೆಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುವುದು ಎಂದರು ಜೊತೆಗೆ ಎರಡು ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಉತ್ಪನ್ನಗಳ ಮಾರಾಟ ಕೇಂದ್ರ ಸ್ಥಾಪನೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ , ಮುಂದಿನ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಕೇಂದ್ರ ಸ್ಥಾಪನೆಗೆ ಮುಂದೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

