ಆನೇಕಲ್ ತಾಲೂಕಿನ ಇಂಡ್ಲವಾಡಿ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಮಂಡಳಿಯ ಸೂರ್ಯ ಸಿಟಿ ನಾಲ್ಕನೇ ಹಂತದಲ್ಲಿ ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಬಗರ್ ಹುಕುಂ ಸಾಗುವಳಿ ರೈತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಇಂಡ್ಲವಾಡಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಹಾಗೂ ಸ್ಥಳೀಯರು ಕರ್ನಾಟಕ ಗೃಹ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ರೈತ ಮುಖಂಡ ಶಿವರಾಮ ರೆಡ್ಡಿ ಇಂಡ್ಲವಾಡಿ ಸುತ್ತಮುತ್ತ 2 ಸಾವಿರ ಎಕರೆ ಪ್ರದೇಶದಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಸೂರ್ಯ ಸಿಟಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಕರ್ನಾಟಕ ಗೃಹ ಮಂಡಳಿ ಬಗರ್ ಹುಕುಂ ಸಾಗುವಳಿದಾರರಿಗೆ ಯಾವುದೇ ಪರಿಹಾರ ನೀಡದೇ ಅನ್ಯಾಯ ಮಾಡುತ್ತಿದೆ. ಇದರಿಂದ ನೂರಾರು ರೈತರು ತಮ್ಮ ಜಮೀನುಗಳನ್ನು ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳು ಹಾಗೂ ವಸತಿ ಸಚಿವರು ಇಲ್ಲಿನ ಸ್ಥಳೀಯ ಬಗರ್ ಹುಕುಂ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

