ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಸರ್ಕಾರಿ ಓಣಿ ಜಾಗ ಸರ್ವೆ ಮಾಡುವ ವೇಳೆ ಒತ್ತುವರಿದಾರರು ಹಾಗೂ ಕಂದಾಯ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು
ಬಳ್ಳೂರು ಗ್ರಾಮದಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಓಣಿ ಜಾಗವನ್ನ ಕೆಲವರು ಒತ್ತುವರಿ ಮಾಡಿಕೊಂಡು ಮನೆಗಳನ್ನು ಕಟ್ಟಿಕೊಂಡಿದ್ದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಅತ್ತಿಬೆಲೆಯ ಉಪ ತಹಶೀಲ್ದಾರ್ ನವೀನ್ ನೇತೃತ್ವದಲ್ಲಿ ಇಂದು ಸರ್ಕಾರಿ ಸರ್ವೆ ಕಾರ್ಯ ನಡೆಸಲಾಗುತ್ತಿತ್ತು
ಆದರೆ ಸರ್ವೆ ಮಾಡುವ ಸಮಯದಲ್ಲಿ ಅಧಿಕಾರಿಗಳು ಹಾಗೂ ಒತ್ತುವರಿದಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಬಳಿಕ ಒತ್ತಡದ ನಡುವೆಯೂ ಕಂದಾಯ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಜಾಗವನ್ನು ಮಾರ್ಕಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದರ ನಡುವೆ ಸರ್ವೇ ನಂಬರ್ 136 ರಲ್ಲಿ 35 ಗುಂಟೆ ಸರ್ಕಾರಿ ಗುಂಡು ತೋಪು ಜಾಗ ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಜೊತೆಗೆ 3.19 ಗುಂಟೆ ಸರ್ಕಾರಿ ಓಣಿಯ ಜಾಗವನ್ನು ಗುರುತಿಸಿ ಮಾರ್ಕಿಂಗ್ ಮಾಡಲಾಗಿದೆ ಎಂದು ಅತ್ತಿಬೆಲೆ ಉಪ ತಹಶೀಲ್ದಾರ್ ನವೀನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

