Breaking
20 Sep 2026, Sun

ಅತ್ತಿಬೆಲೆ ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಲಭ್ಯದ ಕೊರತೆ ಹಿನ್ನೆಲೆ, BEO ವೆಂಕಟೇಶ್ ನೇತೃತ್ವದಲ್ಲಿ ಪೋಷಕರ ವಿಶೇಷ ಸಭೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೋಷಕರ ಸಭೆಯನ್ನು ಕರೆಯಲಾಗಿತ್ತು. ಇಂದು ಬುಧವಾರ ಬಿಇಓ ವೆಂಕಟೇಶ್ ರವರ ನೇತೃತ್ವದಲ್ಲಿ ಪೋಷಕರ ವಿಶೇಷ ಸಭೆಯನ್ನು ನಡೆಸಲಾಗಿತ್ತು. ಅತ್ತಿಬೆಲೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯ ಸೇರಿದಂತೆ ಕೆಲವು ಮೂಲಭೂತ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ದೂರನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಇಂದು ಪೊಲೀಸರು ಹಾಗೂ ಪುರಸಭೆ ಸದಸ್ಯರ ಸಮ್ಮುಖದಲ್ಲಿ ಈ ಒಂದು ವಿಶೇಷ ಸಭೆಯನ್ನು ನಡೆಸಲಾಯಿತು. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಅವರಿಂದ ಮಾಹಿತಿಯನ್ನು ಪಡೆಯಲಾಯಿತು. ಜೊತೆಗೆ ಸಾಧ್ಯವಾದಷ್ಟು ಬೇಗ ಶೌಚಾಲಯದ ಸಮಸ್ಯೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಬಗೆಹರಿಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ್ ಇದೇ ವೇಳೆ ಭರವಸೆಯನ್ನು ನೀಡಿದರು.

Leave a Reply