Breaking
25 May 2026, Mon

ಅತ್ತಿಬೆಲೆಯ ಎಪಿಎಸ್ ಶಿಕ್ಷಣ ಸಂಸ್ಥೆಯಿಂದ ಸಂಕ್ರಾಂತಿ ಸಂಭ್ರಮ

ಆನೇಕಲ್ ತಾಲೂಕಿನ ಅತ್ತಿಬೆಲೆಯ ಎಪಿ‌ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸಲಾಯಿತು. ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಹಳ್ಳಿಕಾರ್ ಎತ್ತುಗಳಿಗೆ ಪೂಜೆ ಸಲ್ಲಿಸಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಸಂಕ್ರಾಂತಿ ಪ್ರಯುಕ್ತ ಶಾಲೆಯಲ್ಲಿ ಹಳ್ಳಿಯ ಸೊಗಡಿನ ವಾತಾವರಣವನ್ನು ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಸಂಕ್ರಾಂತಿ ಹಬ್ಬದ ಮಹತ್ವವನ್ನ ತಿಳಿಸಿಕೊಡಲಾಯಿತು. ಗ್ರಾಮೀಣ ಭಾಗದಲ್ಲಿ ಸಂಕ್ರಾಂತಿ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಹೀಗಾಗಿ ಸಂಕ್ರಾಂತಿ ಹಬ್ಬದ ಆಚರಣೆ ವೈಶಿಷ್ಟ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ‌ ನೀಡಲಾಯಿತು.

ಇದೆ ವೇಳೆ ಮಾತನಾಡಿದ ಎಪಿಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಮುನಿರಾಜು ಕಳೆದ 18 ವರ್ಷಗಳಿಂದ ಎಪಿಎಸ್ ಶಾಲೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಈ ಬಾರಿ ಮಕ್ಕಳ ಜೊತೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿ ಎಳ್ಳು- ಬೆಲ್ಲವನ್ನ ನೀಡಲಾಗಿದೆ‌. ಇತ್ತಿಚಿನ ಯುವ ಸಮೂದಾಯಕ್ಕೆ ಹಿಂದೂ ಧರ್ಮದ ಹಬ್ಬಗಳ ಆಚರಣೆ ಹಾಗೂ ಅವುಗಳ ವೈಶಿಷ್ಟ್ಯಗಳನ್ನು ತಿಳಿಸಿಕೊಡುವ ಕೆಲಸವನ್ನ ಮಾಡಬೇಕು. ಹೀಗಾಗಿ ಸಾಂಪ್ರದಾಯಿಕವಾಗಿ ಎತ್ತುಗಳಿಗೆ ಪೂಜೆ ಸಲ್ಲಿಸಿ ಅತ್ತಿಬೆಲೆಯ ಮುಖ್ಯ ರಸ್ತೆಗಳಲ್ಲಿ ಹಳ್ಳಿ ಕಾರ್ ಎತ್ತುಗಳನ್ನ ಮೆರವಣಿಗೆ ಮಾಡಿ ಸಾರ್ವಜನಿಕರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಕೋರಲಾಗಿದೆ ಎಂದರು.

ಸಂಕ್ರಾಂತಿ ಉತ್ಸವದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಿ ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು, ಮಕ್ಕಳ ಪೋಷಕರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Leave a Reply