Breaking
20 Sep 2026, Sun

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಸರಿಗಮ ವಿಜಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಅವರನ್ನು ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜ.15) ಬೆಳಿಗ್ಗೆ 9:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಿಗಮ ವಿಜಿ ಅವರನ್ನು ಸಿನಿಮಾ ನಟ-ನಟಿಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಹಾಗೂ ಗುಣವಾಗುತ್ತಿದ್ದಾರೆ ಎಂಬ ಭರವಸೆ ವ್ಯಕ್ತಪಡಿಸಿದ್ದರು. ಇದೀಗ ಸತತ ಚಿಕಿತ್ಸೆ ಬಳಿಕ ವಿಜಿ ಅವರು ನಿಧನರಾಗಿದ್ದಾರೆ. ನಾಳೆ (ಜ.16) ಬೆಳಿಗ್ಗೆ 10ರಿಂದ 12ಗಂಟೆಗೆ ವೇಳೆಗೆ ಚಾಮರಾಜಪೇಟೆಯ ಟಿ.ಆರ್.ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Reply