Breaking
20 Sep 2026, Sun

ಕರ್ನಾಟಕ ತಮಿಳುನಾಡು ಗಡಿ ಭಾಗದ ಅಂಚೆಟ್ಟಿ ಗ್ರಾಮದಲ್ಲಿ ಜಲ್ಲಿಕಟ್ಟು ಆಚರಣೆ.

ಕರ್ನಾಟಕ ತಮಿಳುನಾಡು ಗಡಿಭಾಗದ ಅಂಚೆಟ್ಟಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಪಾಯಕಾರಿ ಜಲ್ಲಿಕಟ್ಟು ಕ್ರೀಡೆ ಆಯೋಜನೆ ಮಾಡಲಾಗಿತ್ತು. ಬುಧವಾರ ಸಂಜೆ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಸಾವಿರಾರು ಯುವಕರು ಭಾಗವಹಿಸಿದ್ದರು. ಸಂಕ್ರಾಂತಿ ಹಬ್ಬದ ಅಂಗವಾಗಿ ಕರ್ನಾಟಕ ತಮಿಳುನಾಡು ಗಡಿ ಭಾಗದ ಹಲವಾರು ಗ್ರಾಮಗಳಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಆಯೋಜನೆ ಮಾಡಲಾಗುತ್ತದೆ. ಸಿಂಗರಿಸಿದ ನೂರಾರು ಎತ್ತುಗಳನ್ನು ಬೆದರಿಸುವ ಮೂಲಕ ಇಲ್ಲಿನ ಯುವಕರು ಉತ್ಸಾಹದಿಂದ ಜಲ್ಲಿಕಟ್ಟು ಕ್ರೀಡೆಯನ್ನು ಆಚರಿಸಿದರು.

Leave a Reply