Breaking
10 Feb 2026, Tue

ಹಂದೇನಹಳ್ಳಿ ಸಮೀಪದ ಸೊಳ್ಳೆಪುರದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸ್ಥಳೀಯರಿಂದ ವಿರೋಧ.

ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಳ್ಳೆಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಸ ಸಂಸ್ಕರಣ ಘಟಕಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇಂದು ಸ್ಥಳಕ್ಕೆ ಬಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಗ್ರಾಮದ ಸಮೀಪವೇ ಕಸ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕದಿಂದ ಕೆಟ್ಟ ವಾಸನೆ ಬರುತ್ತಿದ್ದು ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಕಿಡಿಕಾರಿದರು. ಕೂಡಲೇ ಕಸ ಸಂಸ್ಕರಣ ಘಟಕವನ್ನು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಹೀಗಾಗಿ ಕೆಲಕಾಲ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Leave a Reply