Breaking
16 Jul 2026, Thu

ಕರ್ನಾಟಕ ತಮಿಳುನಾಡು ಗಡಿಭಾಗದ ಗೋಪಸಂದ್ರ ಗ್ರಾಮದಲ್ಲಿ ಜಲ್ಲಿಕಟ್ಟು ಸ್ಫರ್ಧೆ

ಕರ್ನಾಟಕ ತಮಿಳುನಾಡು ಗಡಿಭಾಗದ ಗೋಪಸಂದ್ರ ಗ್ರಾಮದಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಜಲ್ಲಿಕಟ್ಟು ಸ್ಪರ್ಧೆಯನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು ಇಂದು ಸಾವಿರಾರು ಜನರ ಸಮ್ಮುಖದಲ್ಲಿ ಸಿಂಗರಿಸಿದ್ದ ಹೋರಿಗಳನ್ನ ಹಿಡಿಯಲು ಯುವಕರು ಹರಸಾಹಸ ಪಡಬೇಕಾಯಿತು. ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ತಮಿಳುನಾಡು ಗಡಿಭಾಗದಲ್ಲಿ ಜಲ್ಲಿಕಟ್ಟು ಆಚರಣೆ ಮಾಡಲಾಗುತ್ತದೆ. ಈ ಬಾರಿಯೂ ಬಿಗಿ ಪೊಲೀಸ್ ಭದ್ರತೆಯ ನಡುವೆ ಜಲ್ಲಿಕಟ್ಟು ಸ್ಪರ್ಧೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸುತ್ತಮುತ್ತಲ ಸಾವಿರಾರು ಜನರು ಜಲ್ಲಿಕಟ್ಟು ಸ್ಪರ್ಧೆಯನ್ನು ಕಣ್ತುಂಬಿ ಕೊಂಡರು.

Leave a Reply