Breaking
1 Apr 2026, Wed

ವಿಲ್ಸನ್ ಗಾರ್ಡನ್ ಮಾರುತಿ ವಿದ್ಯಾಲಯ ಶಾಲೆಯಲ್ಲಿ ಮೂಲಭೂತ ಸೌಕರ್ಯ ಉದ್ಘಾಟಿಸಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿನ ವಿಲ್ಸನ್ ಗಾರ್ಡನ್ ಸಮೀಪದ ಮಾರುತಿ ವಿದ್ಯಾಲಯ ಶಾಲೆಯಲ್ಲಿ ಮೂಲ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ತೇಜಸ್ವಿ ಸೂರ್ಯ ನೆರವೇರಿಸಿದರು. ಸಂಸದರ ಕ್ಷೇತ್ರ ಅಭಿವೃದ್ಧಿ ನಿಧಿಯಲ್ಲಿ ಶಾಲೆಯಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕೆಲವು ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಇಂದು ಲೋಕಾರ್ಪಣೆ ಮಾಡಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

Leave a Reply