ಬೀದರ್ನ ಹೃದಯ ಭಾಗದಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಗಳು ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ಆರೋಪಿಗಳನ್ನು ತಡೆಯಲು ಸ್ಥಳೀಯರು ಮಾಡಿದ ಸಾಹಸ ವ್ಯರ್ಥವಾಗಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.ಬೀದರ್ನ ಹೃದಯ ಭಾಗ ಶಿವಾಜಿ ಚೌಕ್ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.