Breaking
20 Sep 2026, Sun

ಎಲೆಕ್ಟ್ರಾನಿಕ್ ಸಿಟಿ ಸಮೀಪವಿರುವ ಬೆಂಗಳೂರು ಜೈವಿಕ ನಾವಿನ್ಯತ ಕೇಂದ್ರದಲ್ಲಿ ಅಗ್ನಿ ಅವಘಡ

ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಬೆಂಗಳೂರು ಜೈವಿಕ ನಾವಿನ್ಯತ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಗೃಹ ಸಚಿವರಾದ ಪರಮೇಶ್ವರ್ ರವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಜೈವಿಕ ನಾವಿನ್ಯತ ಕೇಂದ್ರದಲ್ಲಿರುವ ಲ್ಯಾಬ್ ನಲ್ಲಿ ರಾಸಾಯನಿಕ ವಸ್ತುಗಳು ಸೋರಿಕೆಯಾಗಿ ಈ ಒಂದು ಘಟನೆ ಸಂಭವಿಸಿದ್ದು ಈ ಒಂದು ಪ್ರಕರಣ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

Leave a Reply