Breaking
20 Sep 2026, Sun

ಹೆಬ್ಬಗೋಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡಿಗರ ಸಂಭ್ರಮ ಕಾರ್ಯಕ್ರಮ

ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಜನವರಿ 18 ಹಾಗೂ 19ರಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕನ್ನಡಿಗರ ಸಂಭ್ರಮ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ. ಇಂದು ಕರವೇ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಅಂಬರೀಶ್ ರವರ ನೇತೃತ್ವದಲ್ಲಿ ಹೆಬ್ಬಗೋಡಿಯಲ್ಲಿ ಪತ್ರಿಕಾ ಘೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಜನವರಿ 18 ಹಾಗೂ 19 ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಹೆಬ್ಬಗೋಡಿಯ ಎಸ್ಎಫ್ ಎಸ್ ಕಾಲೇಜಿನ ಆವರಣದಲ್ಲಿ ಕನ್ನಡಿಗರ ಸಂಭ್ರಮ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಈ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ , ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ರವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕಿ ಚಿತ್ರರವರು ಹಾಗೂ ಹರಿಕೃಷ್ಣ ರವರಿಂದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವಿದ್ದು ಎಲ್ಲಾ ಕನ್ನಡ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕರವೇ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಅಂಬರೀಷ್ ಮನವಿ ಮಾಡಿದ್ದಾರೆ

Leave a Reply