Breaking
21 Jul 2026, Tue

ಅನೇಕಲ್ ಪಟ್ಟಣದಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು

ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನೇಕಲ್ ಪಟ್ಟಣದಲ್ಲಿ ಇಂದು ನಡೆದಿದೆ. 33 ವರ್ಷದ ಸೀಮಾ ಬಾನು ಸಾವನ್ನಪ್ಪಿರುವ ದುರ್ದೈವಿ, ಪತಿ ಯಜಾಜ್ ಜೊತೆ ಅನೇಕಲ್ ನಿಂದ ಜಿಗಣಿ ಮಾರ್ಗವಾಗಿ ಹೋಗುತ್ತಿದ್ದ ಸಮಯದಲ್ಲಿ ರಾಘವೆಂದ್ರ ಭವನ್ ಸಮೀಪ ಹಿಂಬದಿಂದ ಲಾರಿ ಡಿಕ್ಕಿಯಾಗಿ ಮಹಿಳೆಯ ಮೇಲೆ ಹರಿದಿದೆ. ಪರಿಣಾಮ ಸೀಮಾ ಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಈ ಸಂಬಂಧ ಅನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply