Breaking
21 Jul 2026, Tue

ಸರ್ಜಾಪುರದಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೆರೆಯಲ್ಲಿ ಪತ್ತೆ, 6 ವರ್ಷದ ಎಲ್ವಿನ್ ಡಿಸೋಜಾ ಮೃತ ಬಾಲಕ

ಆನೇಕಲ್‌ ತಾಲೂಕಿನ ಸರ್ಜಾಪುರದಲ್ಲಿ ನಾಪತ್ತೆಯಾಗಿದ್ದ6 ವರ್ಷದ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದೆ. ಎಲ್ವಿನ್ ಡಿಸೋಜಾ (6) ಸಾವನ್ನಪ್ಪಿರುವ ಬಾಲಕ, ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆಯಲ್ಲಿ ಇಂದು ಬಾಲಕನ ಶವ ಪತ್ತೆಯಾಗಿದೆ. ನಿನ್ನೆ ಮಹಲ್ ಚೌಡದೇನಹಳ್ಳಿ ಸಮೀಪದ ಮನೆಯಿಂದ ನಾಪತ್ತೆಯಾಗಿದ್ದ ಎಲ್ವಿನ್ ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಸರ್ಜಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದರು.

ಇಂದು ಮಟ್ಟನಹಳ್ಳಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಬಾಲಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ

Leave a Reply