Breaking
10 Feb 2026, Tue

ದೊಮ್ಮಸಂದ್ರ ಸಂತೆ ಬಳಿ ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿ ನಿರ್ಮಾಣ, ಇಓ ಮಂಜುನಾಥ್ ನೇತೃತ್ವದಲ್ಲಿ ಅಂಗಡಿಗಳ ತೆರವು

ದೊಮ್ಮಸಂದ್ರ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡು ರಸ್ತೆ ಬದಿಯಲ್ಲಿ ಅಂಗಡಿ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ ಎಂದು ನಡೆಸಲಾಯಿತು. ತಾ.ಪಂಚಾಯಿತಿ ಇಓ ಮಂಜುನಾಥ್ ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನ ತೆರವು ಮಾಡಲಾಯಿತು. ಇಲ್ಲಿನ ಸಂತೆ ಬಳಿ ರಸ್ತೆ ಒತ್ತುವರಿ ಮಾಡಿ ಅಂಗಡಿ ನಿರ್ಮಾಣ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಇಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವು ಮಾಡಿ ಮುಂದೆ ತೊಂದರೆ ಮಾಡದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು

Leave a Reply