Breaking
20 Sep 2026, Sun

ಕರಿಯಣ್ಣನ ಪಾಳ್ಯದಲ್ಲಿ ಕಾಡಾನೆಗಳ ದಾಳಿಗೆ ರಾಗಿ, ಅವರೆಕಾಯಿ ಹಾಗೂ ಹುರಳಿ ಬೆಳೆ ನಾಶ.

ಕರ್ನಾಟಕ ತಮಿಳುನಾಡು ಗಡಿಭಾಗದ ಕರಿಯಣ್ಣನ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ರೈತರ ಬೆಳೆಯನ್ನ ಹಾನಿಗೊಳಿಸಿವೆ. 8 ಕಾಡಾನೆಗಳ ಹಿಂಡು ರೈತರ ಜಮೀನುಗಳಿಗೆ ನುಗ್ಗಿ ರಾಗಿ ಅವರೇ ಹಾಗೂ ಹುರಳಿ ಬೆಳೆಯನ್ನ ತಿಂದು ನಾಶಗೊಳಿಸಿವೆ. ಕಳೆದ ಒಂದು ವಾರದಿಂದ ಕಾಡಾನೆಗಳಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳಿಂದ ಹಾನಿಯಾದ ರೈತರಿಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರವನ್ನು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply