ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ದಗಂಗೆಯ ಕಾಯಕಯೋಗಿ ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಇಂದು ಹೊಂಗಸಂದ್ರದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಅನ್ನಸಂತರ್ಪಣೆ ನೇರವೆರಿಸಲಾಯಿತು. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಹಾಗೂ ನಿರ್ಗತಿಕ ಮಕ್ಕಳಿಗೆ ವಿದ್ಯಾ ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು . ಶತಾಯುಷಿ ಶಿವಕುಮಾರ ಸ್ವಾಮೀಜಿಗಳ ಆದರ್ಶಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಹೀಗಾಗಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಸತೀಶ್ ರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಟಿ.ರಾಮಚಂದ್ರ ರವರು, ಬಿಜೆಪಿ ಮುಖಂಡರಾದ ರಾಜಪ್ಪ ರವರು, ಶಿವಸ್ವಾಮಿ ರವರು, ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.