Breaking
31 Oct 2025, Fri

ಬೆಳಗಾವಿಯ ಸುವರ್ಣ ವಿದಾನಸೌಧದ ಮುಂದೆ ಗಾಂಧಿ ಪ್ರತಿಮೆಯ ಅನಾವರಣ

ಬೆಳಗಾವಿಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013-2018ರವರೆಗೆ ನಮ್ಮ ಸರ್ಕಾರ ಅನೇಕ ಭಾಗ್ಯಗಳನ್ನು ಕೊಟ್ಟಿದೆ. ಎಲ್ಲ ಜಾತಿಯ ಬಡವರಿಗೆ ನಾವು ಯೋಜನೆಗಳನ್ನು ಕೊಟ್ಟಿದ್ದೇವೆ. ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ ಸರ್ಕಾರ ಬೀಳುತ್ತದೆ ಎಂದು ಹೇಳಿದ್ದರು. ಆದರೆ, ಇನ್ನೂ ನಾವು ಅಧಿಕಾರದಲ್ಲಿದ್ದೇವೆ ಎಂದು ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸರ್ಕಾರ ಬಂದಮೇಲೆ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಅದಕ್ಕಾಗಿ ಬಜೆಟ್‌ನಲ್ಲಿ 55 ಸಾವಿರ ಕೋಟಿ ರೂ. ಹಣ ತೆಗೆದಿಟ್ಟಿದ್ದೇವೆ. ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದರು. ಆದರೆ, ನೇರವಾಗಿ ಜನರಿಗೆ ಗ್ಯಾರಂಟಿ ಯೋಜನೆ ತಲುಪಿಸಿದ್ದೇವೆ. ಅಭಿವೃದ್ಧಿಗೆ ನಾವು ಹಣವನ್ನ ಕೊಟ್ಟಿದ್ದೇವೆ. ಕಾಂಗ್ರೆಸ್ ಗಾಂಧಿಯವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದೆ. ಬಿಜೆಪಿ ಯಾವಾಗಲೂ ಮಹಾತ್ಮ ಗಾಂಧಿಯನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುತ್ತಿತ್ತು. ಆದರೆ ಅದು ನೂರಕ್ಕೆ ನೂರು ಸುಳ್ಳು ಎಂದು ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಮಹಾತ್ಮ ಗಾಂಧಿಯವರ ಪ್ರತಿಮೆಯ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಹೇಳಿದರು.

Leave a Reply