ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬಿಲವಾರನಹಳ್ಳಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಬಿಲವಾರದ ಹಳ್ಳಿ ವಾಸಿ 23 ವರ್ಷದ ಶುತ್ಸಾನಾ ಬಂದಿತ ಮಹಿಳೆ ಲುಕ್ಸಾನ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 9 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬನ್ನೇರುಘಟ್ಟ ಪೊಲೀಸರು ಈಕೆಯನ್ನು ಬಂಧಿಸಿದ್ದು ಇನ್ನುಳಿದ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ