Breaking
4 Jun 2025, Wed

ಕೆ.ಆರ್ ಮಾರುಕಟ್ಟೆಯಲ್ಲಿ ಮಹಿಳೆ ಮೇಲಿನ ಗ್ಯಾಂಗ್‌ರೇಪ್ ಪ್ರಕರಣ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್ ಹಾಗೂ ಶರವಣ ಬಂದಿತ ಆರೋಪಿಗಳು, ಸಂತ್ರಸ್ಥ ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದ ಆರೋಪಿಗಳು ಗೋಡೌನ್ ಸಮೀಪ ಕರೆ ತಂದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು. ಜೊತೆಗೆ ಆಕೆಗೆ ಜೀವ ಬೆದರಿಕೆ ಹಾಕಿದ್ದರು. ಬಳಿಕ ಮಹಿಳೆ ಪೊಲೀಸ್‌ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬಯಲಿಗೆ ಬಂದಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

Leave a Reply