ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳಸಾಗಣೆ, ಮಾರಾಟ ಪ್ರಕರಣಗಳು ವರದಿಯಾಗಿವೆ. ಮೂರು ತಿಂಗಳಲ್ಲಿ ಇಂಥ ಮೂರು ಘಟನೆಗಳು ಬೆಳಕಿಗೆ ಬಂದಿದ್ದು, ಈ ಪೈಕಿ ಏಳು ವರ್ಷದ ಬಾಲಕನೊಬ್ಬನನ್ನು ಪತ್ತೆ ಮಾಡಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು.ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.