Breaking
20 Sep 2026, Sun

ಆನೇಕಲ್ ನಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರವೇ ಬೆಂಬಲ

ಆನೇಕಲ್ ತಾಲೂಕಿನಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಹೋರಾಟವನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುವುದು ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ತಾಲೂಕಿನ ಹಂದೇನಹಳ್ಳಿ ಸುತ್ತಮುತ್ತ ಕೆಐಎಡಿಬಿ ರೈತರ ಫಲವತ್ತಾದ ಭೂಮಿಯನ್ನ ಭೂಸ್ವಾಧೀನ ಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ರೈತರ ತೀವ್ರ ವಿರೋಧದ ನಡುವೆಯೂ ರೈತರ ಭೂಮಿಯನ್ನ ಸ್ವಾಧೀನ ಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿರುವ ಕೆಐಎಡಿಬಿ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರವೀಣ್ ಶೆಟ್ಟಿ ಕಿಡಿ ಕಾರಿದರು. ಅಲ್ಲಿನ ಸ್ಥಳೀಯ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು

ಕರವೇ ರಾಜ್ಯ ಉಪಾಧ್ಯಕ್ಷ ಜಿಗಣಿ ಪುನೀತ್ ಮಾತನಾಡಿ ಆನೇಕಲ್ ತಾಲೂಕಿನಲ್ಲಿ ಸುಮಾರು 4 ಕೈಗಾರಿಕಾ ಪ್ರದೇಶಗಳಿದ್ದು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ. ತಾಲ್ಲೂಕಿನಲ್ಲಿ ಕರ್ನಾಟಕ ಗೃಹ ಮಂಡಳಿ ಹಾಗೂ ಬಿಡಿಎ ವತಿಯಿಂದ ಸಾವಿರಾರು ಎಕರೆ ರೈತರ ಫಲವತ್ತಾದ ಜಮೀನನ್ನ ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸರ್ಕಾರ ಒಂದು ಕಡೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಿ ಮತ್ತೊಂದು ಕಡೆ ರೈತರ ಫಲವತ್ತಾದ ಜಮೀನನ್ನ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಹೀಗಾಗಿ ತಾಲೂಕಿನ ಹಂದೇನಹಳ್ಳಿಯಲ್ಲಿ ನಡೆಯುತ್ತಿರುವ ಕೆಐಎಡಿಬಿ ಅಕ್ರಮ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರವೇ ಪ್ರವೀಣ್ ಶೆಟ್ಟಿ ಬಣ ಸಂಪೂರ್ಣ ಸಹಕಾರ ನೀಡಲಿದೆ ಹಾಗೂ ಮುಂದಿನ ದಿನಗಳಲ್ಲಿ ಈ ಕುರಿತು ಕರವೇ ಹೋರಾಟವನ್ನು ರೂಪಿಸಲಿದೆ ಎಂದು ತಿಳಿಸಿದರು

Leave a Reply