Breaking
10 Feb 2026, Tue

ರಾಮೋಹಳ್ಳಿ ಗ್ರಾ.ಪಂ ವ್ಯಾಪ್ತಿಯ ಭೀಮನಕುಪ್ಪೆ ಗ್ರಾಮದಲ್ಲಿ ಗ್ರಾಮ ಸಭೆ, ಶಾಸಕ ಸೋಮಶೇಖರ್ ಸೇರಿ ಗಣ್ಯರು ಭಾಗಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ರಾಮೋಹಳ್ಳಿ ಪಂಚಾಯತಿ ವ್ಯಾಪ್ತಿಯ ಭೀಮನ ಕುಪ್ಪೆ ಗ್ರಾಮದಲ್ಲಿ ಪಂಚಾಯತಿ ವತಿಯಿಂದ ಗ್ರಾಮಸಭೆ ಆಯೋಜಿಸಲಾಗಿತ್ತು. ಶಾಸಕ ಸೋಮಶೇಖ‌ರ್ ಹಾಗೂ ರಾಮೋಹಳ್ಳಿ ಪಂಚಾಯತಿ ಸದಸ್ಯರು ಗ್ರಾಮ ಸಭೆಗೆ ಚಾಲನೆ ನೀಡಿದರು. ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ತಮ್ಮ ಕುಂದುಕೊರತೆಗಳನ್ನು ಬಗೆಹರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಶಾಸಕರು ಸವಲತ್ತುಗಳ ವಿತರಣೆ ಮಾಡಿದರು. ಗ್ರಾಮದಲ್ಲಿ ಏನೇ ಸಮಸ್ಯೆಗಳಿದ್ದರೂ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನ ಬಗೆಹರಿಸುವುದಾಗಿ ಶಾಸಕರು ಭರವಸೆ ನೀಡಿದರು.

Leave a Reply