Breaking
20 Sep 2026, Sun

ಸುರಗಜಕ್ಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಮುನಿಕೃಷ್ಣ ಅವಿರೋಧ ಆಯ್ಕೆ

ಆನೇಕಲ್ ತಾಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮುನಿಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ಮುನಿಕೃಷ್ಣರವರನ್ನ ಅವಿರೋಧವಾಗಿ ಆಯ್ಕೆ ಮಾಡಿದರು. ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದರು. ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಪಂಚಾಯತಿ ಸದಸ್ಯರಿಗೂ ಮುನಿಕೃಷ್ಣ ಧನ್ಯವಾದ ಅರ್ಪಿಸಿದರು. ಮುಂದೆ ಸುರಗಜಕ್ಕನಹಳ್ಳಿ ಪಂಚಾಯತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡಲು ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಮುನಿಕೃಷ್ಣ ಭರವಸೆ ನೀಡಿದರು.

Leave a Reply