Breaking
21 Sep 2026, Mon

ಕಟ್ಟಿಗೆಹಳ್ಳಿ ಬಳಿಯ ವಿನಾಯಕ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಚಿವ ಕೃಷ್ಣಭೈರೇಗೌಡ ಭೂಮಿಪೂಜೆ

ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಟ್ಟಿಗೆಹಳ್ಳಿ ಸಮೀಪವಿರುವ ವಿನಾಯಕ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚೆಗೆ ವಿನಾಯಕ ಬಡಾವಣೆಯ ರಸ್ತೆಗಳು ಮಳೆಯಿಂದ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಒತ್ತಾಯದ ಮೇರೆಗೆ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಕಂದಾಯ ಸಚಿವರು ಚಾಲನೆ ನೀಡಿದರು

Leave a Reply