Breaking
20 Sep 2026, Sun

ಯಶವಂತಪುರ ಬಳಿಯ ಬಂಡೆಮಠ ವಾರ್ಡ್‌ ನಲ್ಲಿ ಹಿರಿಯ ನಾಗರಿಕರಿಗೆ ಆಯುಷ್ಕಾನ್ ಕಾರ್ಡ್ ವಿತರಿಸಿದ ಶಾಸಕ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಬಂಡೆ ಮಠ ವಾರ್ಡ್ ನಲ್ಲಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡುಗಳನ್ನು ವಿತರಿಸಲಾಯಿತು. ಶಾಸಕ ಸೋಮಶೇಖರ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡುಗಳನ್ನು ವಿತರಿಸಿದರು.

ಕಾರ್ಡ್ ಹೊಂದಿರುವ ಫಲಾನುಭವಿಗಳು 5 ಲಕ್ಷದ ವರೆಗೂ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದ ಪಡೆದುಕೊಳ್ಳಬಹುದು ಈ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಸಾರ್ವಜನಿಕರು ಆಯುಷ್ಮಾನ್ ಭಾರತ್ ಕಾರ್ಡುಗಳನ್ನು ಉಚಿತವಾಗಿ ಪಡೆದುಕೊಳ್ಳಬೇಕು ಎಂದು ಶಾಸಕ ಸೋಮಶೇಖರ್ ತಿಳಿಸಿದರು

Leave a Reply