Breaking
21 Jul 2026, Tue

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಡಿವೈಎಸ್‌ಪಿ ಮೋಹನ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಮುಖಂಡರ ಕುಂದುಕೊರತೆ ಸಭೆ

ಅನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಡಿವೈಎಸ್‌ಪಿ ಮೋಹನ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮುಖಂಡರ ಸಭೆಯ ನಡೆಸಲಾಯಿತು. ಅನೇಕಲ್ ಉಪ ವಿಭಾಗದ ಏಳು ಪೊಲೀಸ್ ಠಾಣೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅನೇಕಲ್ ಉಪ ವಿಭಾಗ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಾರ್ವಜನಿಕರಿಗೆ ಮುಕ್ತವಾಗಿ ಸಭೆಯಲ್ಲಿ ತಮ್ಮ ಕುಂದು ಕೊರತೆಗಳನ್ನು ಪ್ರಸ್ತಾಪಿಸುವಂತೆ ಸೂಚಿಸಲಾಯಿತು. ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಭೆಯಲ್ಲಿ ತಿಳಿಸಲಾಯಿತು.

Leave a Reply