ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮುನಿಕೃಷ್ಣ ಇಂದು ಅಧಿಕಾರ ಸ್ವೀಕಾರ ಮಾಡಿದರು. ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಈ ಹಿಂದೆ ಗ್ರಾಮ ಪಂಚಾಯಿತಿಯಲ್ಲಿ ಕೆಲವು ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗಿತ್ತು. ಹೀಗಾಗಿ ಭ್ರಷ್ಟಾಚಾರ ಮುಕ್ತ ಗ್ರಾಮ ಪಂಚಾಯಿತಿಯನ್ನು ನಿರ್ಮಾಣ ಮಾಡಿ ಪಂಚಾಯಿತಿಯನ್ನು ಮತ್ತಷ ಅಭಿವೃದ್ಧಿಪಡಿಸುವುದಾಗಿ ನೂತನ ಅಧ್ಯಕ್ಷರಾದ ಮುನಿಕೃಷ್ಣ ಭರವಸೆ ನೀಡಿದರು
ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮುನಿಕೃಷ್ಣ ಅಧಿಕಾರ ಸ್ವೀಕಾರ, ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತಿ

