Breaking
20 Sep 2026, Sun

ಪಟ್ಟಣದ ತಳಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವ್ಯಾಪಾರದಿಂದ ಟ್ರಾಫಿಕ್ ಜಾಮ್, ಪುರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಆನೇಕಲ್ ಪಟ್ಟಣದ ತಳಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವ್ಯಾಪಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗುತ್ತಿದೆ. ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಅವರೆಕಾಯಿ ವ್ಯಾಪಾರಿಗಳು ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಇಲ್ಲಿನ ವ್ಯಾಪಾರಿಗಳನ್ನ ಬೇರೆ ಕಡೆ ಸ್ಥಳಾಂತರ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರು

Leave a Reply