Breaking
7 Jun 2025, Sat

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಒಂದುವರೆ ತಿಂಗಳ ಗರ್ಭಿಣಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಗರ್ಭಿಣಿ ಸರಿಯಾದ ಚಿಕಿತ್ಸೆ ಸಿಗದೆ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಅಶ್ವಿನಿ (29) ಮೃತಪಟ್ಟ ದುರ್ದೈವಿ.ಅಶ್ವಿನಿ ಅವರಿಗೆ ಜನವರಿ 27ರ ಸೋಮವಾರ ಇದ್ದಕ್ಕಿದ್ದಂತೆ ರಕ್ತಸ್ರಾವ ಕಾಣಿಸಿಕೊಂಡಿದೆ. ಗಾಬರಿಯಾದ ಕುಟುಂಬಸ್ಥರು ಗರ್ಭಿಣಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಅಶ್ವಿನಿ ಅವರ ಕುಟುಂಬ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಾಗರದ ಸರ್ಕಾರಿ ಆಸ್ಪತ್ರೆ ಕಡೆ ಹೊರಟಿದ್ದಾರೆ. ಆದರೆ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆದಲ್ಲೇ ಅಶ್ವಿನಿ ಕೊನೆ ಉಸಿರೆಳೆದಿದ್ದಾರೆ.

Leave a Reply