ಜಯನಗರ ವಿಧಾನಸಭಾ ಕ್ಷೇತ್ರದ ಜೆಪಿ ನಗರದ 3ನೇ ಹಂತದಲ್ಲಿ ನೂತನವಾಗಿ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಯನಗರ ಶಾಸಕ ಸಿ ಕೆ ರಾಮಮೂರ್ತಿ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು,-ಜೆಪಿ ನಗರ ಮೂರನೇ ಹಂತದಲ್ಲಿ ಕೆಲವು ರಸ್ತೆಗಳಲ್ಲಿ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿತ್ತು, ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ಒಳಚರಂಡ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ