Breaking
20 Sep 2026, Sun

ವಿಧಾನಸೌಧದಲ್ಲಿ ಡಿಸಿಎಂ ಶಿವಕುಮಾ‌ರ್ ನೇತೃತ್ವದಲ್ಲಿ ಬಿಬಿಎಂಪಿ, ಬಿಡಿಎ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಬಿಎಂಪಿ, ಬಿಡಿಎ ಹಾಗೂ ಬಿಎಂಆರ್‌ಸಿಎಲ್ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಸಭೆ ಆಯೋಜನೆ ಮಾಡಲಾಗಿತ್ತು. ಕೆಲವು ಭಾಗಗಳಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

Leave a Reply