Breaking
20 Sep 2026, Sun

ದೊಮ್ಮಸಂದ್ರದ ಸಂತೆ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದ ಸಂತೆ ಬೀದಿಯಲ್ಲಿ ವ್ಯಕ್ತಿಯೊಬ್ಬನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೊಮ್ಮಸಂದ್ರ ನಿವಾಸಿ 35 ವರ್ಷದ ವೆಂಕಟೇಶ್ ಕೊಲೆಯಾದ ದುರ್ದೈವಿ. ರಾತ್ರಿ ಇತನನ್ನ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಸಂತೆ ಬೀದಿಯಲ್ಲಿ ವೆಂಕಟೇಶನನ್ನು ಅಡ್ಡಗಟ್ಟಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನ ನಡೆಸಿದರು. ಮೃತ ವೆಂಕಟೇಶನ ಕುಟುಂಬದ ಜೊತೆ ಮಾತುಕತೆ ನಡೆಸಿದ ಅವರು ಕೆಲವು ಮಾಹಿತಿಗಳನ್ನ ಪಡೆದುಕೊಂಡರು. ಇತ್ತೀಚೆಗೆ ವೆಂಕಟೇಶ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ.. ಈ ವಿಚಾರವಾಗಿ ಕೊಲೆ ನಡೆದಿರಬಹುದು ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply