ಮಹಾ ಕುಂಭಮೇಳ ಮುಗಿಸಿ ಕಾಶಿಯಾತ್ರೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಮೈಸೂರಿನ ಇಬ್ಬರು ವ್ಯಕ್ತಿಗಳು ಹಸುನೀಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಈ ಘಟನೆ ನಡೆದಿದೆ. ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರ ಸಮಯಕ್ಕೆ ರಾಮಕೃಷ್ಣ, ಇಂದು ಬೆಳಗ್ಗೆ 3 ಗಂಟೆಗೆ ಅರುಣ್ ಕೊನೆಯುಸಿರೆಳೆದಿದ್ದಾರೆ. ರಾಮಕೃಷ್ಣ, ಕೆ.ಆರ್.ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅರುಣ್ ಶಾಸ್ತ್ರಿ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರಿಗೂ ಮದುವೆ ಆಗಿರಲಿಲ್ಲ.

