Breaking
21 Jul 2026, Tue

ಚಿನ್ನದ ಸರಗಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಹೆಬ್ಬಗೋಡಿ ಪೊಲೀಸರು, ಬಂಧಿತನಿಂದ ಚಿನ್ನದ ಸರ ಜಪ್ತಿ ಮಾಡಿದ ಪೊಲೀಸರು

ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯೊಬ್ಬನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂದಿತನಿಂದ 3 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ಓಡಾಡುವ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು ಈತ ಸರ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.

Leave a Reply