Breaking
20 Sep 2026, Sun

ಬೊಮ್ಮನಹಳ್ಳಿ ಸಮೀಪ ಕಾವೇರಿ ನಗರದಲ್ಲಿ ಬಟ್ಟೆ ಗೋದಾಮಿಗೆ ಆಕಸ್ಮಿಕ, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ ಬಟ್ಟೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಗೋದಾಮಿನಲ್ಲಿದ್ದ ಕಾರ್ಮಿಕರು ಹೊರಬಂದಿದ್ದಾರೆ. ಬಳಿಕ ಬೆಂಕಿಯನ್ನು ನಂದಿಸಲು ಸಾರ್ವಜನಿಕರು ಪ್ರಯತ್ನ ಪಟ್ಟರು ಸಾಧ್ಯವಾಗಲಿಲ್ಲ. ಬೆಂಕಿ ಹೆಚ್ಚಾಗಿ ಗೋದಾಮಿನಲ್ಲಿದ್ದ ಹಲವು ವಸ್ತುಗಳು ಬೆಂಕಿಗೆ ಸುಟ್ಟು ಕರಕಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.

Leave a Reply