ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಗೊಟ್ಟಿಗೆರೆ ಸಮೀಪವಿರುವ ವಿವರ್ಸ್ ಕಾಲೋನಿಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ವಿವರ್ಸ್ ಕಾಲೋನಿಯ ಬಿಟಿಎಸ್ ಬಡಾವಣೆಯಲ್ಲಿ ರಸ್ತೆಗಳು ಹಾಳಾಗಿ ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ