Breaking
28 Mar 2026, Sat

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜೀ ರವರ ಪುಣ್ಯ ಸ್ಮರಣೆ ಕಾರ್ಯಕ್ರಮ

ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಸಲಾಯಿತು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗಾಂಧೀಜೀ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಹಿಂಸಾ ತತ್ವದ ಮೂಲಕ ಇಡೀ ಜಗತ್ತನ್ನ ಬದಲಾಯಿಸಿದ ಬಾಪೂಜೀ ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಮಂಚೂಣಿ ನಾಯಕರಾಗಿದ್ದರು. ಅವರ ತತ್ವ ಆದರ್ಶಗಳು ಮುಂದಿನ ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿ ನಮನ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Leave a Reply