Breaking
20 Sep 2026, Sun

ಯಲಹಂಕದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ, ಶಾಸಕ ವಿಶ್ವನಾಥ ಭಾಗಿ

ಬೆಂಗಳೂರು ಹೊರವಲಯದ ಯಲಹಂಕದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಸಕ ವಿಶ್ವನಾಥ್ ರವರ ಸಮ್ಮುಖದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಗೌರವ ಅರ್ಪಿಸಲಾಯಿತು, 12 ನೇ ಶತಮಾನದಲ್ಲಿ ಜಾತಿ ಪದ್ಧತಿ, ಅಸ್ಪೃಶ್ಯತೆ, ಹಾಗೂ ಸಮಾಜದ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ವಚನಗಳ ಮೂಲಕ ಜನರಿಗೆ ಅರಿವು ಮೂಡಿಸಿದ್ದ ಮಡಿವಾಳ ಮಾಚಿದೇವ ಸಮ ಸಮಾಜದ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಾಸಕ ವಿಶ್ವನಾಥ್ ನುಡಿ ನಮನ ಸಲ್ಲಿಸಿದರು

Leave a Reply