ಆನೇಕಲ್ ಪಟ್ಟಣದ ಹೊಸೂರು ರಸ್ತೆಯ ತಿಮ್ಮರಾಯಸ್ವಾಮಿ ಹೆಬ್ಬಾಗಿಲು ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಅಪರಿಚಿತನೊಬ್ಬ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಆನೇಕಲ್ ನಿವಾಸಿ ಬಾಬು ಇರಿತಕ್ಕೆ ಒಳಗಾದ ವ್ಯಕ್ತಿ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಬಾಬು ಕುತ್ತಿಗೆಗೆ ಚಾಕು ಇರಿಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಬು ನನ್ನ ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಯಾವ ಉದ್ದೇಶಕ್ಕೆ ಚಾಕು ಇರಿಯಲಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗಾಯಾಳು ಬಾಬು ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

