ಬೆಂಗಳೂರಿನ ವಿಧಾನಸೌಧದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025 ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸರ್ಕಾರದ ಹಲವು ಕ್ಯಾಬಿನೆಟ್ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಜಾಗತಿಕ ಸಮಾವೇಶದಲ್ಲಿ 18 ದೇಶಗಳು ಭಾಗವಹಿಸಲಿದ್ದು 7 ಲಕ್ಷ ಕೋಟಿ ಹೂಡಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಮಾವೇಶದ ರೂಪುರೇಷೆಗಳ ಕುರಿತು ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಯಿತು. ಸಮಾವೇಶ ಯಶಸ್ವಿಯಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ವಿಧಾನಸೌಧದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಹಿನ್ನೆಲೆ ಸಭೆ , 7 ಲಕ್ಷ ಕೋಟಿ ಹೂಡಿಕೆ ಸಾಧ್ಯತೆ
